Breaking
18 May 2026, Mon

ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು

ಉಡುಪಿ: ಹೆಬ್ರಿ ತಾಲೂಕಿನ ಹುತುರ್ಕೆ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯೋರ್ವ ಏಣಿಯಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವನನ್ನು ಹೆಬ್ರಿ ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ಎಂದು ಗುರುತಿಸಲಾಗಿದೆ.

ಸಾತ್ವಿಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ರಜಾದಿನಗಳಲ್ಲಿ ತನ್ನ ವಿದ್ಯಾಭ್ಯಾಸ ಹಾಗೂ ಮನೆಯ ಖರ್ಚಿಗೆ ಸಹಾಯವಾಗಲೆಂದು ಹೆಬ್ರಿ ಹುತುರ್ಕೆಯಲ್ಲಿ ಕೆಲಸಕ್ಕೆ ತೆರಳಿದ್ದನು. ಈ ವೇಳೆ ಆಯತಪ್ಪಿ ಏಣಿಯಿಂದ ಬಿದ್ದು ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *