ಉಳ್ಳಾಲ: ರೌಡಿಶೀಟರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆಗೈದ ಘಟನೆ ಇಂದು (ಮಾ. 27) ಬೆಳಗ್ಗಿನ ಜಾವ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಸಮೀಪ ನಡೆದಿದೆ.

ಕೊಲೆಗೀಡಾದ ವ್ಯಕ್ತಿಯನ್ನು ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42), ಅಲಿಯಾಸ್ ‘ಟ್ಯಾಬ್ಲೆಟ್ ಆರೀಫ್’ ಎಂದು ಗುರುತಿಸಲಾಗಿದೆ.

ಆರೀಫ್ ಅವರು ಮೀನಿನ ವ್ಯಾಪಾರ ನಡೆಸುತ್ತಿದ್ದು, ಇಂದು (ಮಾ. 27) ಬೆಳಿಗ್ಗೆ ಸುಮಾರು 3.30ರ ವೇಳೆಗೆ ತಮ್ಮ ಬುಲೆಟ್ ಬೈಕ್‌ನಲ್ಲಿ ಮಂಗಳೂರಿನ ಕಡೆ ಪ್ರಯಾಣಿಸುತ್ತಿದ್ದರು. ಈ ವೇಳೆ ತೊಕ್ಕೊಟ್ಟು ಓವರ್‌ಬ್ರಿಡ್ಜ್ ಮೇಲ್ಸೇತುವೆಯಲ್ಲಿ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳ ತಂಡವು ಅವರ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






