Breaking
21 Sep 2026, Mon

ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಳ್ಳಾಲದ ಬಂಡಿಕೊಟ್ಯ ನಿವಾಸಿ ಅಬ್ದುಲ್ ರಹಿಮಾನ್ ಅರ್ಫಾನ್ ಅಲಿಯಾಸ್ ಜಲ್ದಿ ಅರ್ಫಾನ್ (29) ಎಂದು ಗುರುತಿಸಲಾಗಿದೆ.

ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಂಟು ಪ್ರಕರಣಗಳು ದಾಖಲಾಗಿತ್ತು. ಬಳಿಕ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *