Breaking
21 Sep 2026, Mon

ವರದಕ್ಷಿಣೆ ಕಿರುಕುಳ ಪ್ರಕರಣ: ಆರೋಪಿ ಬಂಧನ, 2 ವರ್ಷ ಜೈಲು ಶಿಕ್ಷೆ

ಕುಂದಾಪುರ: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪಿಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಿದ್ದಾಪುರ ಗ್ರಾಮದ ಅಕ್ಕುಂಜೆ ನಿವಾಸಿ ಶಶಿಕಾಂತ್ ಶೆಟ್ಟಿ (44) ಎಂದು ಗುರುತಿಸಲಾಗಿದೆ.

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಈತನ ವಿರುದ್ಧ ಆತನ ಪತ್ನಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾದ ಬಳಿಕ ಈತ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಸುಮಾರು 10 ವರ್ಷಗಳ ನಂತರ ಆರೋಪಗಳು ಸಾಬೀತಾಗಿವೆ. ಇದೀಗ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗೆ ಕುಂದಾಪುರ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Leave a Reply

Your email address will not be published. Required fields are marked *