Breaking
28 Mar 2026, Sat

ಕೋಳಿ ವ್ಯವಹಾರ ವಿವಾದ: ಕಾರ್ಕಳದಲ್ಲಿ ಹಲ್ಲೆ ಪ್ರಕರಣ, ನಾಲ್ವರು ಬಂಧನ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿನ ಕೋಳಿ ವ್ಯವಹಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆ ಹಲ್ಲೆ ನಡೆದಿದ್ದು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬೈರಂಪಳ್ಳಿ ಹರಿಕಂಡಿಗೆಯ ಪ್ರತಾಪ್ ಪೂಜಾರಿ (32), ಕಡ್ತಲ ಗ್ರಾಮದ ಸಿರಿಬೈಲು ನಿವಾಸಿ ದಿಲೀಪ್ ಶೆಟ್ಟಿ (28), ಮುತ್ತುಪಾಡಿಯ ಸುದರ್ಶನ್ ಶೆಟ್ಟಿ (36) ಹಾಗೂ ವರಂಗ ಗ್ರಾಮದ ಮೂಡುಕುದೂರು ನಿವಾಸಿ ಆಕಾಶ್ (21) ಎಂದು ಗುರುತಿಸಲಾಗಿದೆ.

ಹರೀಶ್, ಸುಧೀರ್, ದುರ್ಗಾ, ಗುರುದೀಶ್ ಹಾಗೂ ಪ್ರತಾಪ್ ಸೇರಿದಂತೆ ಸುಮಾರು 15 ಮಂದಿ ಮಾ. 26 ರಂದು ರಾತ್ರಿ ಅಂದಾರು ಗ್ರಾಮದ ಮುತ್ತುಪಾಡಿ ಪ್ರದೇಶಕ್ಕೆ ಕಾರು ಮತ್ತು ಬೈಕ್‌ಗಳಲ್ಲಿ ಬಂದು ಸುದರ್ಶನ್ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ವೇಳೆ ಜಗಳವನ್ನು ತಡೆಯಲು ಮುಂದಾದ ಪದ್ಮಾ ಮತ್ತು ಆಕಾಶ್ ಅವರನ್ನು ಹರೀಶ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *