Breaking
6 Aug 2026, Thu

ಅಕ್ಷರಸಂತ ಹಾಜಬ್ಬ, ದೈವ ನರ್ತಕ ಡಾ. ರವೀಶ್ ಪಡುಮಲೆ ಹಾಗೂ ಯಕ್ಷಗಾನ ಕ್ಷೇತ್ರದ ಮೇರು ಸಾಧಕ ಗೋವಿಂದ ಭಟ್ ಅವರಿಗೆ ಡಾಕ್ಟರೇಟ್ ಗೌರವ

ಮಂಗಳೂರು: ಸಮಾಜದ ವಿವಿಧ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಮೂವರು ಗಣ್ಯ ವ್ಯಕ್ತಿಗಳಿಗೆ ಮಂಗಳೂರು ವಿಶ್ವವಿದ್ಯಾಲಯವು ತನ್ನ 44ನೇ ಘಟಿಕೋತ್ಸವದ ಅಂಗವಾಗಿ ಡಾಕ್ಟರೇಟ್ ಪ್ರದಾನ ಮಾಡುವುದಾಗಿ ಘೋಷಿಸಿದೆ.

ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿ ಕರಾವಳಿ ಮೂಲದ “ಅಕ್ಷರಸಂತ” ಎಂದೇ ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ದೈವ ನರ್ತಕ ಜೊತೆಗೆ ಚಿಂತಕರು, ವಾಗ್ಮಿಗಳು ಹಾಗೂ ಶಿಕ್ಷಣ ತಜ್ಞರಾಗಿಯೂ ಗುರುತಿಸಿಕೊಂಡಿರುವ ಡಾ. ರವೀಶ್ ಪಡುಮಲೆ, ಇತ್ತೀಚೆಗೆ ನಿಧನರಾದ ಯಕ್ಷಗಾನ ಕ್ಷೇತ್ರದ ಮೇರು ಸಾಧಕ ಹಾಗೂ ಹಿರಿಯ ಅರ್ಥದಾರಿ ಸೂರಿಕುಮೇರು ಗೋವಿಂದ ಭಟ್ ಅವರು ಈ ಗೌರವಕ್ಕೆ ಭಾಜನರಾಗಲಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *