ಬಂಟ್ವಾಳ: ದ್ವಿಚಕ್ರ ವಾಹನವೊಂದು ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನೇರಳಕಟ್ಟೆ ಸಮೀಪದ ಗಣೇಶ ನಗರದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಹುಕ್ಕಪ್ಪ ಗೌಡ (68ವ) ಎಂದು ಗುರುತಿಸಲಾಗಿದೆ.

ನೇರಳಕಟ್ಟೆಯ ಗಣೇಶ ನಗರದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಹುಕ್ಕಪ್ಪ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ. ಎಸ್ ಭೂಮರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






