Breaking
21 Sep 2026, Mon

ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ

ಉಡುಪಿ: ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ಉದ್ದೇಶದಿಂದ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.

ಐದು ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಕಾಪು ತಾಲೂಕಿನ ಕಳತ್ತೂರು ಸೂರ್ಯಗುಡ್ಡೆ ನಿವಾಸಿ ಮೊಹಮ್ಮದ್ ನೌಫಿಲ್ ಅವರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಹಾಗೆಯೇ, ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಉಡುಪಿ ತಾಲೂಕಿನ ಮಲ್ಪೆ ಕೊಡವೂರು ಗ್ರಾಮದ ಆಶೀರ್ವಾದ್ ನಿವಾಸಿ ಸುಹಾನ್ ಪೂಜಾರಿ ಅವರನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

ಮಾ. 26ರಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *