ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಅಂತರಾಯ ಪಲ್ಕೆಯಲ್ಲಿರುವ ಕೊಳದಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಹಸನಬ್ಬ ಎಂಬವರ ಪುತ್ರ ಮೊಹಮ್ಮದ್ ಹಫೀಜ್ ( 14 ವ) ಎಂದು ಗುರುತಿಸಲಾಗಿದೆ.

ನಾಲ್ವರು ಮಕ್ಕಳು ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಅಂತರಾಯ ಪಲ್ಕೆಯಲ್ಲಿರುವ ಕೊಳದಲ್ಲಿ ಈಜಲು ತೆರಳಿದ್ದರು. ಈ ವೇಳೆ ಹಫೀಜ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.






