Breaking
18 May 2026, Mon

ಜಾನುವಾರು ಕಳವು ಪ್ರಕರಣ: ಆರೋಪಿಗಳ ಮರು ಬಂಧನ

ಕಾರ್ಕಳ: ಜಾನುವಾರು ಕಳವು ಪ್ರಕರಣದ ಆರೋಪಿಗಳನ್ನು ಪೊಲೀಸರು ಮರುಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮೊಹಮ್ಮದ್ ಯೂನಿಸ್ (31), ನಾಸಿರ್ ಅಲಿಯಾಸ್ ಮೊಹಮ್ಮದ್ ನಾಸಿರ್ (28) ಹಾಗೂ ನಾಲ್ಕನೇ ಆರೋಪಿ ಶೌಕತ್ ಆಲಿ (36), ಮೊಹಮ್ಮದ್ ಇಕ್ಬಾಲ್ ಅಲಿಯಾಸ್ ಇಕ್ಕು (29) ಎಂದು ಗುರುತಿಸಲಾಗಿದೆ.

ಕಳೆದ ವರ್ಷ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿ ಪ್ರದೇಶದಲ್ಲಿ ಜಯಶ್ರೀ ಪೂಜಾರಿ ಅವರ ಮನೆಯ ಹಟ್ಟಿಗೆ ನುಗ್ಗಿದ ಆರೋಪಿಗಳು, ತಲವಾರು ತೋರಿಸಿ ಬೆದರಿಕೆ ಹಾಕಿ ಜಾನುವಾರುಗಳನ್ನು ಕಳವು ಮಾಡಿದ್ದರು. ಹಟ್ಟಿಯಲ್ಲಿದ್ದ ಮೂರು ಜಾನುವಾರುಗಳ ಹಗ್ಗಗಳನ್ನು ಕತ್ತರಿಸಿ, ಅವುಗಳನ್ನು ವಾಹನದಲ್ಲಿ ಸಾಗಿಸಿ ಬಳಿಕ ವಧೆ ಮಾಡಿದ್ದಾರೆ.

ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರಂಭಿಕ ಹಂತದಲ್ಲಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

ಆದರೆ ಮುಂದಿನ ತನಿಖೆಯಲ್ಲಿ ಪ್ರಕರಣ ಸಂಘಟಿತವಾಗಿ ಕೃತ್ಯ ನಡೆದಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಪೊಲೀಸರು ಮತ್ತೆ ಕ್ರಮ ಕೈಗೊಂಡು ಪ್ರಮುಖ ಆರೋಪಿಗಳನ್ನು ಮರುಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *