Breaking
17 May 2026, Sun

ತಿಂಗಳ ಹಿಂದಷ್ಟೇ ಮದುವೆಯಾದ ವಿವಾಹಿತ: ವಿಷ ಸೇವಿಸಿ ಸಾವು

ಮಂಗಳೂರು: ತಿಂಡಿಯ ಜೊತೆ ವಿಷ ಸೇವಿಸಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ನೆಲ್ಯಾಡಿ ನಿವಾಸಿ ಸುದೀಪ್ ರೈ(36) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿ ಎಂಬಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಸುದೀಪ್ ರೈ ಅವರು ತಿಂಗಳ ಹಿಂದಷ್ಟೇ ಕಾರ್ಕಳ ತಾಲೂಕಿನ ಯುವತಿಯೊಂದಿಗೆ ಸಬ್‌-ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾಗಿದ್ದರು.

ಯುವ ಉದ್ಯಮಿಯಾಗಿದ್ದ ಸುದೀಪ್ ಅವರು ಬೆಳ್ತಂಗಡಿಯಲ್ಲಿ ಎಸ್‌ಆರ್ ಎನ್ ಗ್ರೂಪ್ ಹೆಸರಲ್ಲಿ ಇಲೆಕ್ಟ್ರಾನಿಕ್ ಮತ್ತು ಸೋಲಾರ್ ಉದ್ಯಮ ನಡೆಸುತ್ತಿದ್ದ ಸುದೀಪ್ ಅವರು ತಿಂಡಿಯ ಜೊತೆಗೆ ವಿಷ ಸೇವಿಸಿದ್ದಾರೆಯೆಂದು ತಿಳಿದುಬಂದಿದ್ದು, ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ

Leave a Reply

Your email address will not be published. Required fields are marked *