Breaking
17 May 2026, Sun

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ದ್ವಿ ಚಕ್ರ ವಾಹನ ಸವಾರ ಸಾವು

ಮಂಗಳೂರು: ಟ್ಯಾಂಕರ್‌ ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಅರ್ಕುಳ ಬ್ರಿಡ್ಜ್ ಬಳಿ ಮಾ. 29 ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪರಂಗಿಪೇಟೆಯ ನಿವಾಸಿ ಮುಹಮ್ಮದ್ ಆಶ್ಫಕ್ (22) ಎಂದು ಗುರುತಿಸಲಾಗಿದೆ.

ಮಾ. 29 ರಂದು ಬಿ.ಸಿ.ರೋಡ್ ಕಡೆಗೆ ಹೋಗುತ್ತಿದ್ದ ಟ್ಯಾಂಕರ್‌ಗೆ ಹಿಂದಿನಿಂದ ಬರುತ್ತಿದ್ದ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಮುಹಮ್ಮದ್ ಆಶ್ಫಕ್ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *