ವಿಟ್ಲ: ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ.ಮೃತರು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.