ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ಸಮೀಪದ ತಿಬ್ಲಪದವು ಮಸೀದಿ ಸಭಾಂಗಣದ ಬಳಿ ನಡೆದಿದೆ.

ಕೋಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 10 ಅಡಿ ಆಳಕ್ಕೆ ಬಿದ್ದು, ಸಭಾಂಗಣ ಕಟ್ಟಡದ ಗೋಡೆಗೆ ಅಪ್ಪಳಿಸಿ ಕೆಳಕ್ಕೆ ಉರುಳಿದೆ.

ಅಪಘಾತದಲ್ಲಿ ಅದೃಷ್ಟವಶಾತ್ ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮಂಗಳೂರು ದಕ್ಷಿಣ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.





