ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಆರಂಬೋಡಿ ಇಲ್ಲಿ ಮುಖ್ಯ ಶಿಕ್ಷಕಿಯಾಗಿ 2018 ರಿಂದ 2025 ರವರೆಗೆ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸುಶೀಲ ಕೆ. ರವರು ಇತ್ತೀಚಿಗೆ ವರ್ಗಾವಣೆಗೊಂಡ ಕಾರಣ ಅವರಿಗೆ ಅಭಿನಂದನೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವು ಮಾ. 29ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಆರಂಬೋಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿಗಳು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಸಿದ್ಧಕಟ್ಟೆ ಇದರ ಅಧ್ಯಕ್ಷರಾದ ಕಿರಣ್ ಕುಮಾರ್ ಮಂಜಿಲ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ರಾಘವೇಂದ್ರ ಭಟ್ ಅಂಡಿಂಜೆ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ರಮೇಶ್ ಬಂಗೇರ, ಆರಂಬೋಡಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಇಲ್ಯಾಸ್ ಅಬ್ದುಲ್ ಹಕೀಂ, ಹೊಕ್ಕಾಡಿಗೋಳಿ ಎಸ್‌ಡಿಎಂಸಿ ಅಧ್ಯಕ್ಷರಾದ ದಿನೇಶ್ ಪೂಜಾರಿ ಹುಲಿಮೇರು, ಆರಂಬೋಡಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರಹಾಸ ಪೂಜಾರಿ ಮೈರಬೆಟ್ಟು, ಸಂಜೀವ ಪೂಜಾರಿ ಅಬುರ, ಆಶಾ ಎಸ್ ಶೆಟ್ಟಿ, ಪ್ರಭಾಕರ ಪೂಜಾರಿ ಮೈರಬೆಟ್ಟು, ರಮೇಶ್ ಪೂಜಾರಿ ಅಬುರ, ಮಂಜುನಾಥ ಶೆಟ್ಟಿ ಪೂಂಜ, ಸುರೇಂದ್ರ ಪೂಜಾರಿ ಮೈರಬೆಟ್ಟು , ತಿಮ್ಮಪ್ಪ ಪೂಜಾರಿ ಕೂಡುರಸ್ತೆ, ಗಣೇಶ್ ಶೆಟ್ಟಿಗಾರ್, ಯಶವಂತಿ, ಶಶಿಕಲಾ, ಶಿಕ್ಷಕಿ ವಿಜಯಲಕ್ಷ್ಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿ ಸುಶೀಲ ಅವರನ್ನು ಗೌರವ ಪೂರ್ವಕವಾಗಿ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಲಾಯಿತು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳು, ಪೋಷಕರು, ಶಾಲಾ ಶಿಕ್ಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಊರವರ ಸಹಕಾರದಿಂದ ಶಾಲೆಯ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಯಿತು. ಸಾರ್ಥಕ ಸೇರಿ ಸಲ್ಲಿಸಿದ ತೃಪ್ತಿ ನನಗಿದೆ ಎಂದು ತಿಳಿಸಿದರು.
ಅತಿಥಿಗಳು ಮುಖ್ಯ ಶಿಕ್ಷಕರು ಕಾರ್ಯಕ್ಷಮತೆಯನ್ನು ಪ್ರಶಂಸಿದರು.

ಅಧ್ಯಕ್ಷತೆಯನ್ನು ವಹಿಸಿದ ಕಿರಣ್ ಕುಮಾರ್ ಮಂಜಿಲ ಅವರು ಮಾತನಾಡಿ ಆರಂಬೋಡಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಮುಖ್ಯ ಶಿಕ್ಷಕಿ ಸುಶೀಲ ಕೆ ರವರ ಪಾತ್ರ ತುಂಬಾ ಹಿರಿದಾದದು. ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸಕಲ ರೀತಿಯ ಸಹಕಾರ ನೀಡುವುದಾಗಿ ಭರವಸೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಎಲ್ಲ ಪದಾಧಿಕಾರಿಗಳು, ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳ ಹಾಗೂ ಊರವರು ಪಾಲ್ಗೊಂಡರು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಉಮೇಶ್ ಶೆಟ್ಟಿ ಪಾಲ್ಯ ಕಾರ್ಯಕ್ರಮ ನಿರೂಪಿಸಿದರು. ಇಲ್ಯಾಸ್ ಅಬ್ದುಲ್ ಹಕೀಂ ಸ್ವಾಗತಿಸಿದರು. ಪ್ರಭಾರ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ವಂದಿಸಿದರು.


