Breaking
1 Apr 2026, Wed

ಮೂಡುಬಿದಿರೆ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಟ್ರಕ್‌ಗೆ ಬೈಕ್ ಡಿಕ್ಕಿ: ತಾಯಿ – ಮಗ ಸಾವು

ಮೂಡಬಿದಿರೆ: ಸಮೀಪದ ಪೆಟ್ರೋಲ್ ಬಂಕ್ ಬಳಿ ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರಕ್‌ ಗೆ ಬೈಕ್‌ ಡಿಕ್ಕಿಯಾಗಿ ತಾಯಿ ಮಗ ಇಬ್ಬರು ಮೃತಪಟ್ಟಿರುವ ಘಟನೆ ಮಾ. 31 ರಂದು ನಡೆದಿದೆ.

ಮೃತಪಟ್ಟವರನ್ನು ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ ಮತ್ತು ಅವರ ಪುತ್ರ ಸೀನ ಎಂದು ಗುರುತಿಸಲಾಗಿದೆ.

ಬೈಕ್‌ ನಲ್ಲಿ ತಾಯಿ ಮಗ ಇಬ್ಬರು ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಬದಿ ನಿಲ್ಲಿಸಲಾಗಿದ್ದ ಟ್ರಕ್‌ ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಪ್ರೇಮಾ ಸ್ಥಳದಲ್ಲೇ ಸಾವನ್ನಪ್ಪಿದ್ದು ಸೀನ ಅವರಿಗೆ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *