Breaking
19 Sep 2026, Sat

ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ಇಬ್ಬರು ಸಹೋದರಿಯರಿಗೆ ಗಾಯ

ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಇಬ್ಬರು ಸಹೋದರಿಯರು ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಮಾ. 31 ರಂದು ನಡೆದಿದೆ.

ಗಾಯಗೊಂಡವರನ್ನು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಿವಾಸಿಗಳಾದ ನಾಗರಾಜ್ ಮತ್ತು ರೂಪ ದಂಪತಿಯ ಪುತ್ರಿಯರಾದ ಚರಿಷ್ಮಾ ಮತ್ತು ಚಸ್ಮಿಕಾ ಎಂದು ಗುರುತಿಸಲಾಗಿದೆ.

ಬಸ್ ರೇಷ್ಮೆ ರಸ್ತೆಯ ಬಳಿ ಚಲಿಸುತ್ತಿದ್ದಾಗ ಆಕಸ್ಮಿಕವಾಗಿ ಬಸ್ಸಿನ ಬಾಗಿಲು ತೆರೆದುಕೊಂಡಿದೆ. ಈ ವೇಳೆ ಬಾಗಿಲ ಸಮೀಪದಲ್ಲಿ ನಿಂತಿದ್ದ ಇಬ್ಬರು ಸೋದರಿಯರು ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ಇಬ್ಬರು ಗಾಯಗೊಂಡಿದ್ದು ಅವರನ್ನು ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಮತ್ತು ಉಜಿರೆಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *