Breaking
1 Apr 2026, Wed

ಮಾದಕ ವಸ್ತು ಸೇವನೆ: ಅಸಭ್ಯ ವರ್ತನೆ, ಓರ್ವ ಆರೋಪಿಯ ಪೊಲೀಸ್ ವಶಕ್ಕೆ

ಬಂಟ್ವಾಳ: ಮಾದಕ ವಸ್ತು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ಸಜಿಪ ಮೂಡ ನಿವಾಸಿ ಶಾಕೀರ್ (28 ) ಎಂದು ಗುರುತಿಸಲಾಗಿದೆ.

ನರಿಕೊಂಬು ಗ್ರಾಮದ ನೆಹರೂ ನಗರದಲ್ಲಿ ಮಾ. 30 ರಂದು ಕೆಲವು ವ್ಯಕ್ತಿಗಳು ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಪೊಲೀಸರನ್ನು ಕಂಡ ಆರೋಪಿಯಗಳು ಸ್ಥಳದಿಂದ ಪರಾರಿಯಾಗಿದ್ದು, ಈ ಪೈಕಿ ಓರ್ವನನ್ನು ಹಿಡಿದು ವಿಚಾರಣೆ ನಡೆಸಲಾಗಿದೆ.

ವಿಚಾರಣೆಯ ವೇಳೆ ಆತ ತಾನು ಹಾಗೂ ತನ್ನೊಂದಿಗಿದ್ದ ಅಸೀಪ್, ಸಿದ್ದಿಕ್ ಮತ್ತು ಇರ್ಷಾದ್ ಎಂಬವರೊಂದಿಗೆ ಸೇರಿ ಮಾದಕ ವಸ್ತು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *