ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಅಶೋಕ್ ನಗರದ ನಿವಾಸಿ ಸುಹಾನ್ ಯಾನೆ ಸೋನು (33) ಎಂದು ಗುರುತಿಸಲಾಗಿದೆ.


ತಲೆಮರೆಸಿಕೊಂಡಿದ್ದ ಆರೋಪಿಯ ವಿರುದ್ಧ ಉರ್ವಾ ಪೊಲೀಸ್ ಠಾಣೆ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಉರ್ವಾ ಪೊಲೀಸ್ ಠಾಣಾ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಎಲ್‌ಪಿಸಿ ವಾರಂಟ್ ಹೊರಡಿಸಿತ್ತು.

ಇದೀಗ ಆರೋಪಿಯನ್ನು ಉರ್ವಾ ಪೊಲೀಸರು ಮುಂಬೈನಲ್ಲಿ ದಸ್ತಗಿರಿ ಮಾಡಿ ಮಾ. 29 ರಂದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


