Breaking
17 May 2026, Sun

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಗಂಭೀರ ಗಾಯ

ಬಂಟ್ವಾಳ: ತಾಲೂಕಿನ ಸಜೀಪ ಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾಗಿ ಮಹಿಳೆ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48 ವ) ಎಂದು ಗುರುತಿಸಲಾಗಿದೆ.

ಮಾ. 30 ರಂದು ಭಾರತಿಯವರು ಮಗಳೊಂದಿಗೆ ಸಜೀಪ ಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ಗುಳಿಗಜ್ಜ ಕಟ್ಟೆಗೆ ಹಣ ಹಾಕುವ ಸಲುವಾಗಿ ಬಂದಿದ್ದರು. ಈ ವೇಳೆ ಮೆಲ್ಕಾರ್ ಕಡೆಯಿಂದ ಮುಡಿಪು ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಬಂಟ್ವಾಳ ‌ಟ್ರಾಫಿಕ್ ಪೋಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *