ಬಂಟ್ವಾಳ: ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಎ. 2 ರಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್ (38) ಎಂದು ಗುರುತಿಸಲಾಗಿದೆ.

ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದ ರಮೇಶ್ ಅವರು ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಮದುವೆಯಾಗದಿರುವ ನೋವಿನಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಲಾಗಿದೆ.



