ಮಂಗಳೂರು: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಎ. 02 ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ನಡೆದಿದೆ

ಗಾಯಗೊಂಡ ವ್ಯಕ್ತಿಯನ್ನು ನಡುಪದವು ನಿವಾಸಿ ಬೇಬಿ ಎಂಬವರ ಮಗ ಸುಶಾಂತ್ (23) ಎಂದು ಗುರುತಿಸಲಾಗಿದೆ.

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಳಿಕ ಲಾರಿ ಸ್ಥಳದಿಂದ ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿ ಚಕ್ರ ವಾಹನ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಬಳಿಕ ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಧಾವಿಸಿ ಶೋಧ ಕಾರ್ಯಾಚರಣೆಯನ್ನು ನಡೆಸಿ ಅಪಘಾತಕ್ಕೆ ಕಾರಣವಾದ ಟ್ರಕ್ ಅನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.


