Breaking
3 Apr 2026, Fri

ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್ ಗೆ ಏರಿ ಕಂಬಕ್ಕೆ ಡಿಕ್ಕಿ: ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬಂಟ್ವಾಳ : ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್‌ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಎ. 01 ರಂದು ನಡೆದಿದೆ.

ಮಂಗಳೂರಿನಿಂದ ಬಿ.ಸಿ.ರೋಡ್‌ ಕಡೆಗೆ ತೆರಳುತ್ತಿದ್ದಾಗ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಂಬವು ಮುರಿದು ಬಿದ್ದಿದ್ದು, ಕಾರು ಪಲ್ಟಿಯಾಗಿದೆ.

ಕಾರಿನಲ್ಲಿ ನಾಲ್ವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳಿದ್ದರು. ಗಾಯಗೊಂಡವರನ್ನು ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *