Breaking
19 Sep 2026, Sat

ಅಕ್ರಮ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೊಬ್ಬ ಪರಾರಿ

ಕಡಬ: ಅಕ್ರಮವಾಗಿ ಕಂಟೇನರ್‌ ವಾಹನಲ್ಲಿ ಜಾನುವಾರಗಳನ್ನು ಸಾಗಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ.

ಇಂದು (ಎ. 3) ಬೆಳಿಗ್ಗೆ ಅಕ್ರಮವಾಗಿ ಜಾನುವಾರುಗಳನ್ನು ಹಾಸನದಿಂದ ಕೇರಳ ಕಡೆಗೆ ಕಂಟೇನರ್‌ ವಾಹನವೊಂದರಲ್ಲಿ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರ ತಂಡವು ಓರ್ವನನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

ಕಂಟೇನರ್ ನಲ್ಲಿ ಸಾಗಿಸುತ್ತಿದ್ದ ಸುಮಾರು 18 ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *