ಉಡುಪಿ: ತುಳು ರಂಗಭೂಮಿ ಕಲಾವಿದ ಸುಜಿತ್ ಶೆಟ್ಟಿ ಪಾದೂರು (54 ವ) ಅವರು ಇಂದು( ಏ. 3) ನಿಧನರಾಗಿದ್ದಾರೆ.

ಹಾಸ್ಯ ಹಾಗೂ ಸಾಮಾಜಿಕ ಪಾತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಪ್ರೇಕ್ಷಕರ ಮನ ಗೆದ್ದಿದ್ದರು.

ಕೆ. ಲೀಲಾಧರ ಶೆಟ್ಟಿ ಅವರ ಸಾರಥ್ಯದ ಕಾಪು ರಂಗ ತರಂಗ ಕಲಾವಿದರು ತಂಡದ ಸ್ಥಾಪಕ ಸದಸ್ಯರಾಗಿದ್ದು, ತಂಡದ ಸಮಗ್ರ ನಿರ್ವಹಣೆಯ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದರು.
ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.



