ಬಂಟ್ವಾಳ : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೋಳಿಯಾರ್ ನಿವಾಸಿ ಮಹಮ್ಮದ್ ಆರೀಫ್ ಎಂದು ಗುರುತಿಸಲಾಗಿದೆ.

ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರಿನ ಮೈದಾನದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




