Breaking
19 Sep 2026, Sat

ಇಬ್ಬರು ರೌಡಿಶೀಟರ್‌ಗಳಿಗೆ ಗಡಿಪಾರು ಆದೇಶ

ಉಡುಪಿ: ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಬ್ಬರು ರೌಡಿಶೀಟರ್‌ ಗಳನ್ನು ಎ. 02 ರಂದು ಗಡಿಪಾರು ಆದೇಶಗಳನ್ನು ಹೊರಡಿಸಿದ್ದಾರೆ.

ಉದ್ಯಾವರ ಗ್ರಾಮದ ಪಿತ್ರೋಡಿ ನಿವಾಸಿ ವಿಜೇತನ ವಿರುದ್ಧ ಕೊಲೆ ಯತ್ನ ಮತ್ತು ಹಲ್ಲೆ ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಈತನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಗಡಿಪಾರು ಮಾಡಲಾಗಿದೆ.

ಪಡುಬಿದ್ರಿ ಪೊಲೀಸ್ ವ್ಯಾಪ್ತಿಯ ಮುದರಂಗಡಿ ನಿವಾಸಿಯಾದ ಆರೀಫ್ ಸಾಹೇಬ್ ವಿರುದ್ಧ ಕೊಲೆ ಯತ್ನ, ಹಲ್ಲೆ ಮತ್ತು ಮಾದಕ ವಸ್ತು ಸೇವನೆ ಸೇರಿದಂತೆ ಐದು ಪ್ರಕರಣ ದಾಖಲಾಗಿದ್ದು, ಈತನ ವಿರುದ್ಧ ಈಗಾಗಲೇ ರೌಡಿಶೀಟ್ ತೆರೆಯಲಾಗಿತ್ತು. ಇದೀಗ ಈತನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪಕ್ಕೆ ಗಡಿಪಾರು ಮಾಡಲಾಗಿದೆ.

Leave a Reply

Your email address will not be published. Required fields are marked *