ಕಾರವಾರ: ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ಎರಡು ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ನಡೆದಿದೆ.

ಭಟ್ಕಳದಿಂದ ಬಾಗಲಕೋಟೆಗೆ ಹೊರಟಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.

ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣವೇ ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



