Breaking
8 Apr 2026, Wed

ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ದ್ವಿಚಕ್ರ ವಾಹನ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಂಟ್ವಾಳದ ಸಜೀಪ್ ಮುನ್ನೂರು ನಿವಾಸಿ ಹಸನ್ ಬಾವ (55) ಮತ್ತು ಬಂಟ್ವಾಳದ ಬಿ ಮೂಡ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂದು ಗುರುತಿಸಲಾಗಿದೆ.

ಮಾ. 21 ರಂದು ಪರ್ಲಿಯಾದಲ್ಲಿರುವ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳವು ಮಾಡಿದ್ದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಬಳಿಕ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಕಳವು ಮಾಡಿದ್ದ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *