Breaking
8 Apr 2026, Wed

ಕ್ರೇನ್ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಕ್ರೇನ್‌ ಡಿಕ್ಕಿಯಾಗಿ ಪಾದಚಾರಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪುತ್ತೂರು ತಾಲೂಕಿನ ಕೊಳ್ತಿಗೆ ನಿವಾಸಿ ತಮಿಳುನಾಡು ಮೂಲದ ಮಹಾಲಿಂಗಂ ಎಂದು ಗುರುತಿಸಲಾಗಿದೆ.

ಮಹಾಲಿಂಗಂ ಅವರು ಉಪ್ಪಿನಂಗಡಿ ಕಡೆಯಿಂದ ಪಿಲಿಗೂಡು ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕ್ರೇನ್ ನಿಯಂತ್ರಣ ತಪ್ಪಿ ಮಹಾಲಿಂಗಂ ಅವರಿಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ತೀವ್ರತೆಗೆ ಮಹಾಲಿಂಗಂ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಪುತ್ರ ಸುದಿನ್ ಎಂಬವರು ಪುತ್ತೂರು ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *