Breaking
8 Apr 2026, Wed

ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು

ಕುಂದಾಪುರ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಏ. 6 ರಂದು ರಾಷ್ಟ್ರೀಯ ಹೆದ್ದಾರಿ 66 ರ ತೆಕ್ಕಟ್ಟೆಯಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಕೋಟೇಶ್ವರದ ಗಾಂಧಿ ನಗರದ ನಿವಾಸಿ ಅಲಿಮಾಬಿ (62) ಎಂದು ಗುರುತಿಸಲಾಗಿದೆ.

ಏ. 6 ರಂದು ಅಲಿಮಾಬಿ ಅವರು ತೆಕ್ಕಟ್ಟೆಯಲ್ಲಿ ನಡೆದ ಮದುವೆ ಆರತಕ್ಷತೆ ಮುಗಿಸಿ ಮನೆಗೆ ಮರಳಲು ಹೆದ್ದಾರಿ ದಾಟುತ್ತಿದ್ದ ವೇಳೆ ಮಂಗಳೂರಿನಿಂದ ಬಾದಾಮಿ-ಐಹೊಳೆ ಕಡೆಗೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಅಲಿಮಾಬಿ ಅವರ ತಲೆ ಮತ್ತು ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

Leave a Reply

Your email address will not be published. Required fields are marked *