ಸುಳ್ಯ: ಕಾಣಿಕೆ ಡಬ್ಬಿ ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಅರೋಪಿಯನ್ನು ಆಂದ್ರಪ್ರದೇಶದ ಪಶ್ಚಿಮ ಗೋದಾವರಿ ನಿವಾಸಿ ಮಹಮ್ಮದ್ ಸಲ್ಮಾನ್ (35) ಎಮದು ಗುರುತಿಸಲಾಗಿದೆ.

ಮಾ. 30 ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕದಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಮಾಡಿದ್ದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಬಳಿಕ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಏ. 06 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿತನಿಂದ ಕಳವು ಮಾಡಿದ 2000 ರೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ಮಾನ್ಯ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.



