Breaking
8 Apr 2026, Wed

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ : ಸಹಾಯಕ ಔಷಧ ನಿಯಂತ್ರಕ ಮನೆ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್ ಅವರ ಮನೆ ಸೇರಿದಂತೆ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ ಏಪ್ರಿಲ್.6ರಂದು ಮಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದರ ಹಿನ್ನೆಲೆ ಲೋಕಾಯುಕ್ತ ತಂಡದ ಆರು ಅಧಿಕಾರಿಗಳು ಮಂಗಳೂರು, ಬೆಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಸೇರಿದಂತೆ ಹಲವು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಅಂದಾಜು ₹3,37,04,000 ಮೌಲ್ಯದ ಸ್ಥಿರ ಹಾಗೂ ಚರಾಸ್ತಿಗಳನ್ನು ಪತ್ತೆಹಚ್ಚಲಾಗಿದೆ. ಇದರಲ್ಲಿ ಬೆಂಗಳೂರಿನ ನಿವಾಸವೊಂದರಲ್ಲೇ ₹23.64 ಲಕ್ಷ ನಗದು ಹಾಗೂ ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿವೆ.

ಇದಲ್ಲದೆ, ಬಾಗೇಪಲ್ಲಿಯ ಮನೆ ಮತ್ತು ವಾಣಿಜ್ಯ ಮಳಿಗೆಗಳು, ಬೆಂಗಳೂರಿನ ಫ್ಲ್ಯಾಟ್‌ಗಳು ಹಾಗೂ ಮಂಗಳೂರಿನ ಕಚೇರಿ ಮತ್ತು ನಿವಾಸಗಳಲ್ಲೂ ತಪಾಸಣೆ ನಡೆಸಲಾಗಿದೆ.

ಪ್ರಸ್ತುತ ಅಧಿಕಾರಿ ಬಾಬು ಬಿ.ಎನ್ ವಿರುದ್ಧ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *