Breaking
9 Apr 2026, Thu

ಲಾರಿ ಹಾಗೂ ಬಸ್ ಮುಖಾಮುಖಿ ಡಿಕ್ಕಿ: ಚಾಲಕರಿಬ್ಬರಿಗೆ ಗಂಭೀರ ಗಾಯ

ಮಂಗಳೂರು: ಗುರುಪುರ ಸಮೀಪದ ಬೆಳ್ಳಿಬೆಟ್ಟು ಎಂಬಲ್ಲಿ ಲಾರಿ ಮತ್ತು ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಗಂಭೀರ ಗಾಯಗೊಂಡ ಘಟನೆ ಏ. 08 ರಂದು ನಡೆದಿದೆ.

ಬೆಳ್ಳಿಬೆಟ್ಟುವಿನ ತಿರುವಿನಲ್ಲಿ ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿ ಹಾಗೂ ಮಂಗಳೂರಿನಿಂದ ಕಾರ್ಕಳದತ್ತ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ನಡುವೆ ಈ ಅಪಘಾತದ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರೂ ಚಾಲಕರಿಗೂ ಗಂಭೀರ ಗಾಯಗಳಾಗಿದ್ದು ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಗಂಭೀರ ಗಾಯಗೊಂಡವರನ್ನು ತಕ್ಷಣವೇ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *