Breaking
9 Apr 2026, Thu

ರೌಡಿಶೀಟರ್ ಆರಿಫ್ ಕೊಲೆ ಪ್ರಕರಣ: ಏಳು ಆರೋಪಿಗಳ ಬಂಧನ

ಮಂಗಳೂರು: ರೌಡಿಶೀಟರ್ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕಿರ್, ಇರ್ಫಾನ್, ರಿಜ್ವಾನ್ ಹಾಗೂ ಕೊಲೆಕೃತ್ಯಕ್ಕೆ ಸಹಕರಿಸಿದ್ದ ಇರ್ಷಾದ್ ಎಂದು ಗುರುತಿಸಲಾಗಿದೆ.

ಮಾ. 27ರಂದು ಆರಿಫ್ ತನ್ನ ಬೈಕ್‌ನಲ್ಲಿ ಬಂದರ್ ಮೀನು ಮಾರುಕಟ್ಟೆಯ ಕಡೆಗೆ ತೆರಳುತ್ತಿದ್ದಾಗ, ಉದ್ದೇಶಪೂರ್ವಕವಾಗಿ ಹಿಂದಿನಿಂದ ಬಂದ ಕಾರು ತೊಕ್ಕೊಟ್ಟು ಫ್ಲೈಓವರ್ ತಲುಪುತ್ತಿದ್ದಂತೆ ಅವರ ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಆರಿಫ್ ನೆಲಕ್ಕೆ ಬಿದ್ದ ನಂತರ, ಮಾರಕ ಆಯುಧಗಳನ್ನು ಹೊಂದಿದ್ದ ಗುಂಪು ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿತ್ತು.

ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಲಾಗಿದೆ.

ಕೊಲೆ ಪ್ರಕರಣದಲ್ಲಿ ಇನ್ನೂ ಹೆಚ್ಚಿನವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪ್ರಸ್ತುತ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ.

Leave a Reply

Your email address will not be published. Required fields are marked *