Breaking
5 Aug 2026, Wed

600ಕ್ಕೆ 600 ಅಂಕ: ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ

ಮೂಡಬಿದಿರೆ: 2025 – 26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, 600ಕ್ಕೆ 600 ಅಂಕಗಳನ್ನು ಗಳಿಸಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಛಲ ಮತ್ತು ದೃಢಸಂಕಲ್ಪ ಇದ್ದರೆ ಏನನ್ನೂ ಸಾಧಿಸಬಹುದು ಎಂಬುದಕ್ಕೆ ದಿಶಾ ಅವರು ಉತ್ತಮ ಉದಾಹರಣೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ದಿಶಾ ಅವರು ಪರೀಕ್ಷೆಗೆ ಉತ್ತಮವಾಗಿ ತಯಾರಿ ನಡೆಸಿದ್ದರು. ಮೊದಲ ಮೂರು ಪರೀಕ್ಷೆಗಳನ್ನು ಯಶಸ್ವಿಯಾಗಿ ಬರೆದಿದ್ದರು. ಆದರೆ ವಿಧಿಯಾಟ ಬೇರೆ ಆಗಿ, ಪರೀಕ್ಷೆಗಳು ನಡೆಯುತ್ತಿರುವ ವೇಳೆಯಲ್ಲೇ ಅವರ ತಾಯಿ ಆಕಸ್ಮಿಕವಾಗಿ ನಿಧನರಾದರು.

ಒಂದು ಕಡೆ ತಾಯಿಯನ್ನು ಕಳೆದುಕೊಂಡ ದುಃಖ, ಇನ್ನೊಂದೆಡೆ ಉಳಿದ ಮೂರು ಪರೀಕ್ಷೆಗಳ ಸವಾಲು. ಈ ಎರಡರ ನಡುವೆಯೂ ದಿಶಾ ಅವರು ತಮ್ಮ ದುಃಖವನ್ನು ತಡೆದು, ಧೃತಿಗೆಡದೆ ಪರೀಕ್ಷೆಗಳನ್ನು ಎದುರಿಸಿದರು. ತಾಯಿಯ ಕನಸನ್ನು ನನಸು ಮಾಡುವ ದೃಢ ಸಂಕಲ್ಪದೊಂದಿಗೆ ಮುಂದುವರಿದ ಅವರು, ಅಂತಿಮವಾಗಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

Leave a Reply

Your email address will not be published. Required fields are marked *