Breaking
19 Sep 2026, Sat

ಪರಂಗಿಪೇಟೆ ಕಡೆಗೋಳಿ ಮಹಿಳಾ ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕು ತುಂಬೆ ವಲಯದ ಪರಂಗಿಪೇಟೆ ಕಡೆಗೋಳಿ ಮಹಿಳಾ ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ರಚನೆಗೆ ರೂ. 2 ಲಕ್ಷ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ರವರು ಸಂಘದ ಅಧ್ಯಕ್ಷರು ಹಾಗೂ ಸದಸ್ಯರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಭಾಸ್ಕರ ಚೌಟ, ತಾರಾನಾಥ ಕೊಟ್ಟಾರಿ, ಪದ್ಮನಾಭ ಗೋವಿನ ತೋಟ, ತುಂಬೆ ವಲಯದ ಮೇಲ್ವಿಚಾರಕಿ ಮಮತಾ, ಪರಂಗಿಪೇಟೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಅಮಿತ, ಹಾಗೂ ಹಾಲು ಉತ್ಪಾದಕ ಸಂಘದ ಅಧ್ಯಕ್ಷರು ಕಾರ್ಯದರ್ಶಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *