Breaking
10 Apr 2026, Fri

ವರದಿಗೆ ಸ್ಪಂದನೆ: ಲಾಯಿಲ ರಸ್ತೆ ಅಭಿವೃದ್ಧಿಗೆ ಅಧಿಕಾರಿಗಳ ಭೇಟಿ

ಬೆಳ್ತಂಗಡಿ: ಲಾಯಿಲ ಗ್ರಾಮದ ಲಾಯಿಲ ಸ್ಮಶಾನ–ಬೆರ್ಕೆ–ಲಾಯಿಲಬೈಲು–ಗಾಣದಕೊಟ್ಯ–ಚಂದ್ಕೂರು ದೇವಸ್ಥಾನ ರಸ್ತೆಯ ಬಗ್ಗೆ ವಸ್ತುನಿಷ್ಠ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ, ಸನ್ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ವಿಷಯವನ್ನು ಗಮನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ರಾಜ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಅದನ್ನು ಪರಿಗಣಿಸಿದ ರಾಜ್ಯ ಕಾರ್ಯದರ್ಶಿಗಳು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಮುಂದಿನ ಕ್ರಮಕ್ಕಾಗಿ ಪತ್ರ ರವಾನಿಸಿದ್ದಾರೆ.

ಇಂದು ಈ ಪ್ರದೇಶಕ್ಕೆ ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಲೆಕ್ಕಾಧಿಕಾರಿಗಳು ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಅಧಿಕಾರಿಗಳು ಭೇಟಿ ನೀಡಿ, ವಸ್ತುನಿಷ್ಠ ವರದಿಯನ್ನು ಸಿದ್ಧಪಡಿಸಿದ್ದಾರೆ.

ಇದಕ್ಕಿಂತಲೂ ಮುಖ್ಯವಾಗಿ, ಅತ್ಯಂತ ಪ್ರಾಮಾಣಿಕವಾಗಿ ವಸ್ತುನಿಷ್ಠ ವರದಿ ಸಿದ್ಧಪಡಿಸಿ, ಪತ್ರಿಕೆಗಳಲ್ಲಿ ಪ್ರಕಟಿಸಿ ನಮ್ಮ ಊರಿನ ಸಮಸ್ಯೆಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದ ಬೆಳ್ತಂಗಡಿ ಪತ್ರಕರ್ತ ಗೆಳೆಯರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ.

ಈ ರಸ್ತೆ ಅಭಿವೃದ್ಧಿಯಾಗುವುದಾದರೆ ಅದರ ಸಂಪೂರ್ಣ ಶ್ರೇಯಸ್ಸು ಬೆಳ್ತಂಗಡಿ ಪತ್ರಕರ್ತರಿಗೆ ಸಲ್ಲುತ್ತದೆ.

ಒಟ್ಟಿನಲ್ಲಿ, ನಮ್ಮ ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ವರದಿ ಪ್ರಕಟಿಸಿದ ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿಯೊಬ್ಬ ಸದಸ್ಯರಿಗೂ ನಮ್ಮ ಗ್ರಾಮದ ಪ್ರತಿಯೊಬ್ಬರ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಮುಂದಿನ ದಿನಗಳಲ್ಲಿ ರಸ್ತೆ ಉದ್ಘಾಟನಾ ಸಮಾರಂಭದಲ್ಲಿ ಎಲ್ಲಾ ಪತ್ರಕರ್ತರನ್ನು ಗೌರವಯುತವಾಗಿ ಸನ್ಮಾನಿಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *