ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ನಾಯಿಲದಲ್ಲಿ ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಏ. 10 ರಂದು ನಡೆದಿದೆ.

ಮೃತಪಟ್ಟ ಯುವಕನನ್ನು ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿಥ್ ( 32) ಎಂದು ಗುರುತಿಸಲಾಗಿದೆ.

ಏ. 10ರಂದು ನಾಯಿಲದಲ್ಲಿರುವ ಸಂಬಂಧಿಕರ ಮನೆಯಲ್ಲಿ ನಡೆದ ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆಗಾಗಿ ವೇದಿಕೆ ಏರಿದ ಅಶ್ವಿಥ್, ಕಾರ್ಯಕ್ರಮ ಆರಂಭಿಸುತ್ತಿದ್ದಂತೆಯೇ ಹಠಾತ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





