ಕುಂದಾಪುರ : ಟಿಪ್ಪರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಏ. 10 ರಂದು ನಡೆದಿದೆ.

ಮೃತಪಟ್ಟ ಮಹಿಳೆಯನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಎಂಬವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ.

ಶಾರದಾ ಅವರು ಕೋಟೇಶ್ವರ ಅಂಕದ ಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ಮಗನ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಕೂಟಿ ಚಲಾಯಿಸುತ್ತಿದ್ದ ಮಗ ಯಾವುದೇ ಪ್ರಾಣಾಪಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




