ವಿಟ್ಲ: ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಅಪರಿಚಿತನೋರ್ವ ಕದ್ದು ಪರಾರಿಯಾಗಿರುವ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ನಡೆದಿದೆ.

ಕೋಡಪದವು ಮದಕದ ನಿವಾಸಿಯೊಬ್ಬರ ಮಗು ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಬೈಕ್ ನಲ್ಲಿ ಅತಿ ವೇಗವಾಗಿ ಬಂದ ಅಪರಿಚಿತನೋರ್ವ ಮಗುವಿನ ಕುತ್ತಿಗೆಯಲ್ಲಿದ್ದ ಸರವನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.
ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದೆ.





