ಸುಳ್ಯ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವತಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಏ. 11 ರಂದು ರಾತ್ರಿ ನಡೆದಿದೆ.

ಮೃತಪಟ್ಟ ಯುವತಿಯನ್ನು ಸುಳ್ಯದ ಕಂದಡ್ಕ ನಿವಾಸಿ ಶಶಿಕಲಾ ಭಟ್ ಅವರ ಪುತ್ರಿ ಕ್ಷಿಪ್ರಾ (27) ಎಂದು ಗುರುತಿಸಲಾಗಿದೆ.

ಕ್ಷಿಪ್ರಾ ಅವರು ತನ್ನ ಸಹೋದ್ಯೋಗಿಗಳೊಂದಿಗೆ ಕಾರಿನಲ್ಲಿ ಆಂಧ್ರಪ್ರದೇಶಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ನಿದ್ದೆಯ ಮಂಪರಿನಲ್ಲಿ ಕಾರಿನ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ.

ಪರಿಣಾಮ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕ್ಷಿಪ್ರಾ ಗಂಭೀರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇತರ ಮೂವರು ಸಹೋದ್ಯೋಗಿಗಳು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕ್ಷಿಪ್ರಾ ಅವರು ಬೆಂಗಳೂರಿನ ಒಂದು ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಉದ್ಯೋಗದಲ್ಲಿದ್ದರು ಎಂದು ತಿಳಿದುಬಂದಿದೆ.


