Breaking
19 Sep 2026, Sat

ಪರಶುರಾಮ ಥೀಮ್ ಪಾರ್ಕ್ ಪರಿಸರದ ಉಮಿಕಲ್ ಬೆಟ್ಟದಲ್ಲಿ ಆಕಸ್ಮಿಕ ಬೆಂಕಿ

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಪರಿಸರದ ಉಮಿಕಲ್ ಬೆಟ್ಟದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಬೈಲೂರು ಸಮೀಪದ ಪ್ರಸಿದ್ಧ ಪ್ರವಾಸಿ ತಾಣವಾದ ಪರಶುರಾಮ ಥೀಮ್ ಪಾರ್ಕ್ ಪರಿಸರದ ಉಮಿಕಲ್ ಬೆಟ್ಟದಲ್ಲಿ ಏ. 11 ರಂದು ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಸುತ್ತಮುತ್ತಲಿನ ಮರ-ಗಿಡಗಳು ಹಾಗೂ ಒಣಗಿದ ಪೊದೆಗಳು ಬೆಂಕಿಗೆ ಆಹುತಿಯಾಗಿವೆ.

ಬೆಂಕಿ ಥೀಮ್ ಪಾರ್ಕ್‌ನ ಮುಖ್ಯ ಆವರಣಕ್ಕೆ ವ್ಯಾಪಿಸದ ಹಿನ್ನೆಲೆಯಲ್ಲಿ ಕಟ್ಟಡಕ್ಕೆ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *