Breaking
13 Apr 2026, Mon

ಮೆದುಳು ಜ್ವರಕ್ಕೆ ಯುವಕ ಬಲಿ

ಬೆಳ್ತಂಗಡಿ: ಮೆದುಳು ಜ್ವರದಿಂದ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಕಿಲ್ಲೂರು ರಾಗಿಕುಮೇರ್ ಮನೆ ನಿವಾಸಿ, ಶಶಿರಾಜ್ ಪೂಜಾರಿ (34 ವ) ಎಂದು ಗುರುತಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಶಶಿರಾಜ್ ಪೂಜಾರಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕಡಿಮೆಯಾಗದ ಹಿನ್ನಲೆಯಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *