Breaking
13 Apr 2026, Mon

ಟಿಪ್ಪರ್‌ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್‌ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಗುರುಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗೋಪಾಲ್ ಮುಳಿಹಿತ್ಲು ಬಳಿ ವಾಸವಾಗಿದ್ದ ಗೋಪಾಲ್ (29ವ) ಎಂದು ಗುರುತಿಸಲಾಗಿದೆ.

ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್‌ ಲಾರಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *