Breaking
13 Apr 2026, Mon

ಮಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಯುವಕ ಆತ್ಮಹತ್ಯೆ

ಮಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಶೆಡ್ಡೆ ಪ್ರದೇಶದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೂಡುಶೆಡ್ಡೆಯ ಎದುರುಪದವು ನಿವಾಸಿ ಮೊಹಮ್ಮದ್ ಆಶಿಕ್ ಎಂದು ಗುರುತಿಸಲಾಗಿದೆ.

ಕಾಲೇಜು ದಿನಗಳಲ್ಲಿ ಆಶಿಕ್ ಅವರು ಉಳ್ಳಾಲ ಮೂಲದ ಸಹಪಾಠಿಯನ್ನು ಪ್ರೀತಿಸುತ್ತಿದ್ದರು. ಪದವಿ ಮುಗಿಸಿದ ಬಳಿಕ ಅವರು ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲ ದಿನಗಳಿಂದ ಯುವತಿ ಆಶಿಕ್‌ನಿಂದ ದೂರವಿರಲು ಪ್ರಯತ್ನಿಸುತ್ತಿದ್ದ ಹಿನ್ನೆಲೆಯಲ್ಲಿ, ಇವರಿಬ್ಬರ ನಡುವೆ ಪದೇಪದೇ ಭಿನ್ನಾಭಿಪ್ರಾಯಗಳು ಉಂಟಾಗುತ್ತಿದ್ದವು ಎನ್ನಲಾಗಿದೆ.

ಈ ಹಿನ್ನೆಲೆ ಆಶಿಕ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದರ ಮಧ್ಯೆ, ಆಶಿಕ್ ಆತ್ಮಹತ್ಯೆಗೆ ಯುವತಿಯೇ ಪ್ರಚೋದನೆ ನೀಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಶಿಕ್ ಅವರ ಮೊಬೈಲ್ ಫೋನ್ ಪರಿಶೀಲಿಸಿದಾಗ ಯುವತಿ ಅವಾಚ್ಯ ಶಬ್ದಗಳಿಂದ ಬೈದಿರುವುದು ಕಂಡುಬಂದಿದೆ.

ಈ ಕುರಿತು ಪೊಲೀಸರು ಆಶಿಕ್ ಅವರ ಮೊಬೈಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *