ಮೂಡಬಿದಿರೆ: ಅಕ್ರಮವಾಗಿ ಜಾನುವಾರಗಳನ್ನು ಸಾಗಿಸುತ್ತಿದ್ದ ಎರಡು ವಾಹನಗಳನ್ನು ಮೂಡಬಿದಿರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂಡಬಿದಿರೆ ಸಮೀಪದ ತೋಡಾರ್ ಪಡ್ಡೋಡಿ ಪ್ರದೇಶದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೊಲೀಸರು ಪಿಕಪ್ ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ದನಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಸದ್ಯ ಪೊಲೀಸರು ಎಲ್ಲಾ ಜಾನುವಾರುಗಳನ್ನು ರಕ್ಷಿಸಿ, ಸಾಗಾಟಕ್ಕೆ ಬಳಸಿದ ಎರಡು ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಕ್ರಮ ಬಲೆ ಬೀಸಿದ್ದಾರೆ.


