ಬಂಟ್ವಾಳ: ಪುರ ಸಭೆಯ ಮಾಜಿ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು (66 ವ) ಅವರು ಅನಾರೋಗ್ಯದಿಂದ ಏ. 13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ನಂದರಬೆಟ್ಟು ಅವರು ಅನ್ಸಾರಿಯಾ ಇಸ್ಲಾಮಿಕ್ ಮದರಸ ಮತ್ತು ಮದೀನಾ ಜುಮಾ ಮಸೀದಿಯ ಸ್ಥಾಪಕ ಅಧ್ಯಕ್ಷರಾಗಿ 16 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಹಲವು ಧಾರ್ಮಿಕ, ಸಾಮಾಜಿಕ, ರಾಜಕೀಯ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದರು.

ಮುಹಮ್ಮದ್ ನಂದರಬೆಟ್ಟು ಅವರ ನಿಧನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.



