ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಸಿದ್ದಕಟ್ಟೆ ಇಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳು, ಪೋಷಕರು, ಊರ ಪರವೂರ ದಾನಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ನಿರ್ಮಾಣಗೊಂಡ
ನೂತನ ಭೋಜನಾಲಯ ಹಾಗೂ ರಂಗಮಂಟಪ ಉದ್ಘಾಟನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿಸೆಂಬರ್ 14ನೇ ಶನಿವಾರ ನಡೆಯಲಿದ್ದು
ಕಾರ್ಯಕ್ರಮವನ್ನು ಬಂಟ್ವಾಳದ ಶಾಸಕರಾದ ರಾಜೇಶ್ ನಾಯ್ಕ್ ಯು ಉದ್ಘಾಟಿಸಲಿದ್ದು ಮುಖ್ಯ ಅತಿಥಿಗಳು ಹಾಗೂ ವಿಶೇಷ ಆಹ್ವಾನಿತರು ಭಾಗವಿಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.