ಕಾರ್ಕಳ: ನಿಟ್ಟೆ ಗ್ರಾಮದ ಬೋರ್ಕಲ್ಲುಗುಡ್ಡೆ ಪ್ರದೇಶದಲ್ಲಿ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ ಘಟನೆ ನಡೆದಿದೆ.


ಕರಿಯ ಪೂಜಾರಿ ಅವರ ಮನೆಯ ಸಮೀಪದಲ್ಲಿರುವ ತೆರೆದ ಬಾವಿಗೆ ಚಿರತೆ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ, ಬಲೆ ಹಾಗೂ ಪಂಜರದ ಸಹಾಯದಿಂದ ಚಿರತೆಯನ್ನು ಸುರಕ್ಷಿತವಾಗಿ ಬಾವಿಯಿಂದ ಹೊರತೆಗೆದಿದ್ದಾರೆ. ಬಳಿಕ ಅದನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



